Ticker

6/recent/ticker-posts

Yadgiri District Court Recruitment 2026 - ಯಾದಗಿರಿ ಜಿಲ್ಲಾ ನ್ಯಾಯಾಲಯದಲ್ಲಿ ನೇಮಕಾತಿ 2026 - ಇವತ್ತೇ ಅರ್ಜಿ ಸಲ್ಲಿಸಿ.

ಯಾದಗಿರಿ  ಜಿಲ್ಲಾ ನ್ಯಾಯಾಲಯದಲ್ಲಿ ನೇಮಕಾತಿ 2026 - ಮಹಿಳೆಯರು ಮತ್ತು ಪುರುಷರು ಇವತ್ತೇ ಅರ್ಜಿ ಸಲ್ಲಿಸಿ, ಸಂಪೂರ್ಣ ಮಾಹಿತಿ ನೀಡಲಾಗಿದೆ.

Karnataka Govt Job

District Court recruitment - 2026 

ಹಲೋ ಸ್ನೇಹಿತರೆ ನಮಸ್ಕಾರ, ನೀವು ಸರ್ಕಾರಿ ಉದ್ಯೋಗದ ಹುಡುಕಾಟದಲ್ಲಿದ್ದೀರಾ? ಅದರಲ್ಲೂ ಕರ್ನಾಟಕ ಹೈಕೋರ್ಟ್‌ನಲ್ಲಿ ಕೆಲಸ ಮಾಡಬೇಕೆಂಬ ಕನಸು ನಿಮ್ಮದಾಗಿದೆಯೇ? ಹಾಗಾದರೆ ನಿಮಗೊಂದು ಸಿಹಿ ಸುದ್ದಿ. ನೋಡಿ ಸ್ನೇಹಿತರೆ ಕರ್ನಾಟಕ ರಾಜ್ಯ ಸರ್ಕಾರದಿಂದ ಯಾದಗಿರಿ  ಜಿಲ್ಲಾ ನ್ಯಾಯಾಲಯದಲ್ಲಿ ಹೊಸ ಅಧಿಸೂಚನೆ ಪ್ರಕಟ ಮಾಡಲಾಗಿದೆ. ಯಾದಗಿರಿ ಜಿಲ್ಲಾ ನ್ಯಾಯಾಲಯಗಳಲ್ಲಿ  ಕಲ್ಯಾಣ ಕರ್ನಾಟಕ ( ಸ್ಥಳೀಯ ವೃಂದ ) ದಲ್ಲಿ ಖಾಲಿ ಇರುವ  ಆದೇಶ ಜಾರಿಕಾರ ಹಾಗೂ ಸೇವಕ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಯ ಹೆಸರು, ಹುದ್ದೆಗಳ ಸಂಖ್ಯೆ, ಉದ್ಯೋಗದ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಿತಿ, ವೇತನ ಶ್ರೇಣಿ, ಆಯ್ಕೆ ವಿಧಾನ, ಪ್ರಮುಖ ದಾಖಲೆಗಳು, ಅರ್ಜಿ ಸಲ್ಲಿಸುವ ಪ್ರಾರಂಭ ಮತ್ತು ಕೊನೆಯ ದಿನಾಂಕ, ಅರ್ಜಿ ಶುಲ್ಕ ಹಾಗೂ ಇತರೆ ಮಾಹಿತಿಯನ್ನು ಯಾದಗಿರಿ ಜಿಲ್ಲಾ ನ್ಯಾಯಾಲಯ ಬಿಡುಗಡೆ ಮಾಡಿದ ಅಧಿಸೂಚನೆ ಪ್ರಕಾರ ಈ ಕೆಳಗಡೆ ವಿವರವಾಗಿ ನೀಡಲಾಗಿದೆ. ಎಲ್ಲಾ ಮಾಹಿತಿಯನ್ನು ಸಂಪೂರ್ಣವಾಗಿ ಓದಿಕೊಂಡು ಅರ್ಜಿ ಸಲ್ಲಿಸಿ.

ಯಾದಗಿರಿ ಜಿಲ್ಲಾ ನ್ಯಾಯಾಲಯ ಕಲ್ಯಾಣ ಕರ್ನಾಟಕ ( ಸ್ಥಳೀಯ ವೃಂದ ) ದಲ್ಲಿ ಖಾಲಿ ಇರುವ ಹುದ್ದೆಗಳ ಸಂಪೂರ್ಣ ಮಾಹಿತಿ.

Department Name (ಇಲಾಖೆಯ/ಸಂಸ್ಥೆಯ ಹೆಸರು) : 

 ಯಾದಗಿರಿ  ಜಿಲ್ಲಾ ನ್ಯಾಯಾಲಯ ನೇಮಕಾತಿ -2026 

Post Name (ಹುದ್ದೆಯ ಹೆಸರು) :

ಆದೇಶ ಜಾರಿಕಾರ ಹಾಗೂ ಜವಾನ ಹುದ್ದೆಗಳು 

Total No. of post (ಒಟ್ಟು ಹುದ್ದೆಗಳ ಸಂಖ್ಯೆ) :

ಹುದ್ದೆ ಹುದ್ದೆಗಳ ಸಂಖ್ಯೆ
ಆದೇಶ ಜಾರಿಕಾರ 9
ಜವಾನ (ಸೇವಕ) 5

Post Location (ಉದ್ಯೋಗದ ಸ್ಥಳ) : 

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಯಾದಗಿರಿ ಜಿಲ್ಲೆ, ಕರ್ನಾಟಕದಲ್ಲಿ ಕರ್ತವ್ಯ ನಿರ್ವಹಿಸಬೇಕು.

Who Can Apply (ಯಾರು ಅರ್ಜಿ ಸಲ್ಲಿಸಬಹುದು) :

ಕರ್ನಾಟಕದ ಮಹಿಳೆಯರು ಮತ್ತು ಪುರುಷರು ಅರ್ಜಿ ಸಲ್ಲಿಸಬಹುದು.

Educational Qualification (ಶೈಕ್ಷಣಿಕ ಅರ್ಹತೆ) :

1. Process Server - ಆದೇಶ ಜಾರಿಕಾರ :

• ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಿಂದ ನಡೆಸುವ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಮತ್ತು ಲಘು  ವಾಹನ ಚಾಲನಾ ಪರವಾನಿಗೆ ಪತ್ರ ( driving licence) ಹೊಂದಿದ ಅಭ್ಯರ್ಥಿಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು.

2. Peon - ಸೇವಕ :

• ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಿಂದ  ನಡೆಸುವ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು ಹಾಗೂ ಕನ್ನಡ ಓದಲು ಮತ್ತು ಬರೆಯಲು ಬರಬೇಕು.

Age Limit (ವಯೋಮಿತಿ) :

ನಿಯಮಗಳ ಪ್ರಕಾರ - ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು.

Age relaxation (ವಯೋಮಿತಿ ಸಡಿಲಿಕೆ) :

 •ಸಾಮಾನ್ಯ ಅಭ್ಯರ್ಥಿಗಳಿಗೆ - ಗರಿಷ್ಠ 35 + 5 ವರ್ಷ 

 •ಪ್ರವರ್ಗ 2A, 2B, 3A, 3B ಅಭ್ಯರ್ಥಿಗಳಿಗೆ 38 + 5 ವರ್ಷ 

 •ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ 1 ಅಭ್ಯರ್ಥಿಗಳಿಗೆ 40 + 5 ವರ್ಷ

Pay Scale (ವೇತನ ಶ್ರೇಣಿ) :


ಹುದ್ದೆ ವೇತನ
ಆದೇಶ ಜಾರಿಕಾರ 31,775 - 61,300
ಜವಾನ 27,000 - 46,675


Selection Process (ಆಯ್ಕೆ ಪ್ರಕ್ರಿಯೆ) :

• ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಒಟ್ಟು ಶೇಕಡವಾರು ಅಂಕಗಳ ಆಧಾರದ ಮೇಲೆ ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳನ್ನು ಪ್ರಕಟಿಸಿರುವ ಹುದ್ದೆಗಳಿಗೆ ಅನುಗುಣವಾಗಿ ಸಂದರ್ಶನಕ್ಕೆ ಕರೆಯಲಾಗುವುದು ಮತ್ತು ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ಸಂದರ್ಶನವು  10 ಅಂಕಗಳನ್ನು ಒಳಗೊಂಡಿರುತ್ತದೆ.

Required Documents (ಅಗತ್ಯವಿರುವ ದಾಖಲೆಗಳು) :

1. Aadhar Card 
2. SSLC Marksheet 
3. Caste Certificate
4. HK certificate (371j)
5. Phone Number 
6. Mail ID 
7. Passport Size Photo and Signature
8. Reservation (Rural Certificate , Kannada Medium Certificate)

Application Procedure (ಅರ್ಜಿ ಸಲ್ಲಿಸುವ ವಿಧಾನ) :

ಅಭ್ಯರ್ಥಿಯು ಈ ಹುದ್ದೆಗೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು.

ಹಂತ 1 - ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆಯು ಹೊರಡಿಸಿದ ಅಧಿಸೂಚನೆಯನ್ನು ಸರಿಯಾಗಿ ಓದಿಕೊಳ್ಳಬೇಕು. 

ಹಂತ 2 - ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.

 ಹಂತ 3 - ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಶನ್ ಪ್ರಾರಂಭ ಮಾಡಿ.

 ಹಂತ 4 - ಅಪ್ಲಿಕೇಶನ್ ನಲ್ಲಿರುವ ಎಲ್ಲಾ ಮಾಹಿತಿಯನ್ನು ( ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ಹೋಗುವ ಮುನ್ನ ಒಮ್ಮೆ ಪರಿಶೀಲಿಸಿ.

 ಹಂತ 5 - ಅಪ್ಲಿಕೇಶನ್ ನಲ್ಲಿ ಯಾವುದೇ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ ( ಅಗತ್ಯವಿದ್ದರೆ )

 ಹಂತ 6 - ಕೊನೆಯದಾಗಿ ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

 ಹಂತ 7 - ಭವಿಷ್ಯದ ಉಲ್ಲೇಖಕ್ಕಾಗಿ ಅರ್ಜಿಯ ಪ್ರತಿಯನ್ನು ಡೌನ್ಲೋಡ್ ಮಾಡಿ ಪ್ರಿಂಟ್ ತೆಗೆದುಕೊಳ್ಳಿ.

Application Fee (ಅರ್ಜಿ ಶುಲ್ಕ) :

• ಸಾಮಾನ್ಯ ವರ್ಗ  ಅಭ್ಯರ್ಥಿಗಳಿಗೆ - ₹ 200

• ಪ್ರವರ್ಗ 2A, 2B, 3A, 3B ಅಭ್ಯರ್ಥಿಗಳಿಗೆ - ₹ 100

• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ 1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ - ₹ 100

• ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಆನ್ಲೈನ್ನಲ್ಲಿ ಡೆಬಿಟ್ ಕಾರ್ಡ್ ಕ್ರೆಡಿಟ್ ಕಾರ್ಡ್ ನೆಟ್ ಬ್ಯಾಂಕಿಂಗ್ ಯುಪಿಐ ಮೂಲಕ ಶುಲ್ಕ ಪಾವತಿಸಬೇಕು.

Important Dates (ಪ್ರಮುಖ ದಿನಾಂಕಗಳು) :

 •ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ : 13-03-2026 

 •ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ : 12-04-2026

 •ಶುಲ್ಕ ಪಾವತಿಸುವ ಕೊನೆಯ ದಿನಾಂಕ : 13-04-2026


Important Links (ಪ್ರಮುಖ ಲಿಂಕ್  ಗಳು) :


NOTIFICATION PDF LINKS
PROCESS SERVER CLICK HERE
PEON CLICK HERE
APPLY LINK CLICK HERE
TELEGRAM LINK CLICK HERE

ಕೊನೆಯ ಮಾತು : ನಾವು ನೀಡಿರುವ  ಉದ್ಯೋಗದ ಮಾಹಿತಿ ನಿಮಗೆ ಇಷ್ಟವಾಗಿದೆ ಎಂದು ಭಾವಿಸುತ್ತೇವೆ. ಈ ಉದ್ಯೋಗದ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಿ.

Post a Comment

0 Comments